Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ದಾವಣಗೆರೆ ಚುನಾವಣಾ ಅಂಗಳಕ್ಕೆ ಝಮೀರ್ ಅಹ್ಮದ್ ಖಾನ್ ಎಂಟ್ರಿ
  • ರಾಜ್ಯ

ದಾವಣಗೆರೆ ಚುನಾವಣಾ ಅಂಗಳಕ್ಕೆ ಝಮೀರ್ ಅಹ್ಮದ್ ಖಾನ್ ಎಂಟ್ರಿ

Jiokannadanews Posted on 5 months ago 1 minute read
Zameer Ahmed Khan Started Campaign in Davangere

Zameer Ahmed Khan

ದಾವಣಗೆರೆ: ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣಕ್ಕೆ ಈಗ ಹೊಸ ಕಳೆ ಬಂದಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ಪ್ರಚಾರದಿಂದ ದೂರ ಉಳಿದಿದ್ದ ಸಚಿವ ಝಮೀರ್ ಅಹ್ಮದ್ ಖಾನ್, ಹೈಕಮಾಂಡ್ ಸೂಚನೆಯಂತೆ ಇಂದು (ಏಪ್ರಿಲ್ 5) ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ.

ಅಸಮಾಧಾನಕ್ಕೆ ಬಿತ್ತು ತೆರೆ:

ಹಿರಿಯ ನಾಯಕ ದಿ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಕಣಕ್ಕಿಳಿದಿದ್ದಾರೆ. ಆರಂಭದಲ್ಲಿ ಝಮೀರ್ ಅಹ್ಮದ್ ಅವರು ತಮ್ಮ ಆಪ್ತ ಸಾದಿಕ್ ಪೈಲ್ವಾನ್ ಅವರಿಗೆ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿದ್ದರು.

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಝಮೀರ್ ಈಗ ಅಖಾಡಕ್ಕೆ ಇಳಿಯಲು ಒಪ್ಪಿದ್ದಾರೆ.

“ನಾನು ಲಾಬಿ ಮಾಡಿಲ್ಲ”

ಈ ಬಗ್ಗೆ ಮಾತನಾಡಿರುವ ಝಮೀರ್ ಅಹ್ಮದ್ ಖಾನ್, “ನಾನು ಯಾರ ವಿರುದ್ಧವೂ ಲಾಬಿ ಮಾಡಿಲ್ಲ. 2023ರಲ್ಲೇ ಈ ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ ಬಿಟ್ಟುಕೊಡುವುದಾಗಿ ಶಾಮನೂರು ಶಿವಶಂಕರಪ್ಪನವರು ಮಾತು ಕೊಟ್ಟಿದ್ದರು. ಅದನ್ನು ನಾನು ನೆನಪಿಸಿದ್ದೆ ಅಷ್ಟೇ. ಈಗ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ,” ಎಂದು ಹೇಳುವ ಮೂಲಕ ವಿವಾದಕ್ಕೆ ಪೂರ್ಣವಿರಾಮ ಇಟ್ಟಿದ್ದಾರೆ.

ಮುಸ್ಲಿಂ ಮತಗಳ ಮೇಲೆ ಕಣ್ಣು:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಝಮೀರ್ ಅಹ್ಮದ್ ಖಾನ್ ಅವರ ಪ್ರಚಾರವು ಸಮರ್ಥ್ ಶಾಮನೂರು ಅವರಿಗೆ ಈ ಮತಗಳನ್ನು ಕ್ರೋಢೀಕರಿಸಲು ವರದಾನವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೇರಳದ ಪ್ರಚಾರ ಮುಗಿಸಿ ಬಂದಿರುವ ಸಚಿವರು, ಇಂದು ಸಮರ್ಥ್ ಪರ ಬಿರುಸಿನ ಮತಯಾಚನೆ ನಡೆಸಲಿದ್ದಾರೆ.

ಕಾಂಗ್ರೆಸ್‌ನ ಭರವಸೆ:

2026ರ ಉಪಚುನಾವಣೆಯಲ್ಲಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ ಸಂದರ್ಭದಲ್ಲಿ ಉಂಟಾದ ಅಸಮಾಧಾನವನ್ನು ಶಮನಗೊಳಿಸಲು, ಕಾಂಗ್ರೆಸ್‌ನ ಹಿರಿಯ ನಾಯಕರು ಮುಂದಿನ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತು ಮುಂಬರುವ ವಿಧಾನ ಪರಿಷತ್ (MLC) ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಮತ್ತು ಪ್ರಾತಿನಿಧ್ಯ ನೀಡುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಚಿವ ಝಮೀರ್ ಅಹ್ಮದ್ ಖಾನ್ ಅವರು ಈ ಕ್ಷೇತ್ರವು ಅಲ್ಪಸಂಖ್ಯಾತರು ಹೆಚ್ಚಿರುವ ಕ್ಷೇತ್ರವಾದ್ದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಬಲವಾಗಿ ಪ್ರತಿಪಾದಿಸಿದ್ದರು. ಉಪಚುನಾವಣೆಯಲ್ಲಿ ಸಮರ್ಥ್ ಶಾಮನೂರು ಅವರ ಪರ ಪ್ರಚಾರಕ್ಕೆ ಇಳಿಯುವ ಮುನ್ನ ಅವರು ಇದೇ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದರು. ಅಲ್ಲದೆ 2028 ರಲ್ಲಿ ದಾವಣಗೆರೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಯಾರು ಗೆಲ್ಲಬಹುದು?

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬುದು ಸದ್ಯಕ್ಕೆ ಕುತೂಹಲದ ವಿಷಯವಾಗಿದ್ದು, ಸಮರ್ಥ್ ಶಾಮನೂರು ಮತ್ತು ಶ್ರೀನಿವಾಸ್ ದಾಸಕರಿಯಪ್ಪ ನಡುವೆ  ಟೈಟ್ ಫೈಟ್ ಕಂಡುಬರುತ್ತಿದೆ. ಈ ಚುನಾವಣೆಯ ಸಂಭವನೀಯ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿರುವ ಪ್ರಮುಖ ಅಂಶಗಳು ಇಲ್ಲಿವೆ:

ಶಾಮನೂರು ಕುಟುಂಬದ ವರ್ಚಸ್ಸು: ದಾವಣಗೆರೆ ದಕ್ಷಿಣವು ಕಳೆದ ಹಲವು ವರ್ಷಗಳಿಂದ ಶಾಮನೂರು ಶಿವಶಂಕರಪ್ಪ ಅವರ ಭದ್ರಕೋಟೆಯಾಗಿದೆ. ಸಮರ್ಥ್ ಶಾಮನೂರು ಅವರು ಅನುಕಂಪದ ಅಲೆಯ ನಿರೀಕ್ಷೆಯಲ್ಲಿದ್ದಾರೆ.

ಅಲ್ಪಸಂಖ್ಯಾತರ ಅಸಮಾಧಾನ: ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಅಸಮಾಧಾನವಿದ್ದು, ಇದು ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಸಮೀಕ್ಷೆಗಳು ಹೇಳಿವೆ. ಇದನ್ನು ಶಮನ ಮಾಡಲು ಈಗ ಝಮೀರ್ ಅಹ್ಮದ್ ಖಾನ್ ಅಖಾಡಕ್ಕೆ ಇಳಿದಿದ್ದಾರೆ.

ಗೆಲುವಿನ ವಿಶ್ವಾಸ: ಸಚಿವ ಪ್ರದೀಪ್ ಈಶ್ವರ್ ಸೇರಿದಂತೆ ಹಲವು ನಾಯಕರು ಸಮರ್ಥ್ ಶಾಮನೂರು ಅವರು 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ: ಬಿಜೆಪಿ ಈ ಬಾರಿ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದ್ದು, ಬದಲಾವಣೆಯ ಮಂತ್ರ ಜಪಿಸುತ್ತಿದೆ.

ರಾಜ್ಯ ನಾಯಕರ ಪ್ರಚಾರ: ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರು ಈಗಾಗಲೇ ಪ್ರಚಾರ ನಡೆಸಿ, ಈ ಬಾರಿ ಶಾಮನೂರು ಕುಟುಂಬದ ಭದ್ರಕೋಟೆ ಧೂಳೀಪಟವಾಗುವುದು ಮತ್ತು ಬಿಜೆಪಿ ಖಂಡಿತಾ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತದಾರರ ಒಲವು: ಇತ್ತೀಚಿನ ಸಮೀಕ್ಷೆಗಳು ಮತ್ತು ಗ್ರೌಂಡ್ ರಿಪೋರ್ಟ್‌ಗಳ ಪ್ರಕಾರ, ಕೆಲವು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವು ಕಡೆ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಅಲ್ಪಸಂಖ್ಯಾತ ಮತಗಳು ಮತ್ತು ಗ್ಯಾರಂಟಿ ಯೋಜನೆಗಳ ಪ್ರಭಾವ ಫಲಿತಾಂಶ ನಿರ್ಧರಿಸುವಲ್ಲಿ ಮುಖ್ಯವಾಗಲಿವೆ.

ಭಯ ಮತ್ತು ಬದಲಾವಣೆ: ಅಲ್ಪ ಸಂಖ್ಯಾತರ ಮತಗಳು ವಿಭಜನೆಯಾದರೆ ಬಿಜೆಪಿಗೆ ಗೆಲುವು ದಕ್ಕುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಕಾಂಗ್ರೆಸ್ ನಾಯಕರುಗಳು ಒಗ್ಗಟ್ಟಿನ ಜಪ ಮಾಡುತ್ತಿದ್ದಾರೆ. ಅದರಲ್ಲೂ ಮುನಿಸಿಕೊಂಡು ಪ್ರಚಾರದಿಂದ ದೂರವೇ ಉಳಿದಿದ್ದ ಝಮೀರ್ ಅಹ್ಮದ್ ಖಾನ್ ಅವರನ್ನು ಇದೀಗ ದಾವಣಗೆರೆಗೆ ಕರೆ ತರಲಾಗಿದೆ.

ಇದೀಗ ಝಮೀರ್ ಅಹ್ಮದ್ ಖಾನ್ ಅವರ ಆಗಮನದಿಂದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್ ಪರವೇ ಇರಲಿದ್ದಾರಾ ಅಥವಾ ಎಸ್​ಡಿಪಿಐ ಇಲ್ಲಾ ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿ ತಮ್ಮ ಆಕ್ರೋಶವನ್ನು ಹೊರ ಹಾಕಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: IPL 2026: ಅಭಿಷೇಕ್ ಶರ್ಮಾಗೆ 25 ಲಕ್ಷ ರೂ. ದಂಡ..!

ಅಂದಹಾಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಮತದಾನವು ಏಪ್ರಿಲ್ 9, 2026 ರಂದು ನಡೆಯಲಿದ್ದು, ಫಲಿತಾಂಶವು ಮೇ 4, 2026 ರಂದು ಹೊರಬೀಳಲಿದೆ.

 

About the Author

Jiokannadanews

Administrator

jiokannadanews.com

Visit Website View All Posts

Post navigation

Previous: IPL 2026: ಅಭಿಷೇಕ್ ಶರ್ಮಾಗೆ 25 ಲಕ್ಷ ರೂ. ದಂಡ..!
Next: ‘ಶರಣ್ಯ’ ಸುತ್ತ ಅನುಮಾನಗಳ ಹುತ್ತ..!

Related Stories

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 day ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 7 days ago
Gruha Lakshmi Re-verification: What You Need to Know.
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಬರಬೇಕಿದ್ದರೆ ಈ ದಾಖಲೆಗಳು ನೀಡಲೇಬೇಕು!

Jiokannadanews Posted on 1 week ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 1 day ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 5 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 7 days ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 day ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 5 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 7 days ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.