Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ದೇಶ
  • ಸಿಎಂ ಆಪ್ತನ ಹತ್ಯೆ ಪ್ರಕರಣ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ!
  • ದೇಶ

ಸಿಎಂ ಆಪ್ತನ ಹತ್ಯೆ ಪ್ರಕರಣ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ!

Jiokannadanews Posted on 2 months ago 1 minute read
CBI Arrests BJP Workers in Suvendu Aide Murder

suvendu adhikari- chandranath rath

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಹಾಗೂ ವೈಯಕ್ತಿಕ ಸಹಾಯಕ (PA) ಚಂದ್ರನಾಥ್ ರಥ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಹತ್ವದ ಯಶಸ್ಸು ಸಾಧಿಸಿದೆ. ಜುಲೈ 31, 2026 ರಂದು ಸಿಬಿಐ ಅಧಿಕಾರಿಗಳು ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಇಬ್ಬರು ಪ್ರಮುಖ ಶಂಕಿತರನ್ನು ಬಂಧಿಸಿದ್ದಾರೆ. ಅಚ್ಚರಿಯ ವಿಷಯವೆಂದರೆ, ಬಂಧಿತರಿಬ್ಬರೂ ಪ್ರಸ್ತುತ ಆಡಳಿತಾರೂಢ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದಾರೆ!

ಈ ಬಂಧನದ ಬೆನ್ನಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದರ ಹಿಂದೆ ಪ್ರಭಾವಿ ನಾಯಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಘಟನೆ?

ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿಯಾಗಿದ್ದ ಚಂದ್ರನಾಥ್ ರಥ್ (41), ಸುವೇಂದು ಅಧಿಕಾರಿ ಅವರ ಅತ್ಯಂತ ನಂಬಿಕಸ್ಥ ಆಪ್ತರಾಗಿದ್ದರು. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮುನ್ನ, ಅಂದರೆ ಮೇ 6, 2026 ರಂದು ಅವರ ಹತ್ಯೆ ನಡೆದಿತ್ತು.

ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್‌ನಲ್ಲಿರುವ ತಮ್ಮ ನಿವಾಸಕ್ಕೆ ಚಂದ್ರನಾಥ್ ಅವರು ಎಸ್‌ಯುವಿ ವಾಹನದಲ್ಲಿ ಮರಳುತ್ತಿದ್ದಾಗ, ಬೈಕ್‌ನಲ್ಲಿ ಬಂದ ಶೂಟರ್‌ಗಳು ಅವರ ಮೇಲೆ ಸಮೀಪದಿಂದ ಹತ್ತಕ್ಕೂ ಹೆಚ್ಚು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು.

ಬಲೆಗೆ ಬಿದ್ದ ‘ಆಪ್ತ’ ಸಹೋದರರು!

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ ಶನಿವಾರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಹತ್ಯೆಯ ಸಂಚು ರೂಪಿಸಿದ ಆರೋಪದ ಮೇಲೆ ಸಾಗರ್ ಸೋಂಕರ್ ಮತ್ತು ಸಾಹಿಬ್ ಸೋಂಕರ್ ಎಂಬ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ.

ಬಂಧಿತ ಸೋಂಕರ್ ಸಹೋದರರು ಮೃತ ಚಂದ್ರನಾಥ್ ರಥ್ ಅವರ ತಂಡದಲ್ಲೇ ನಿಕಟವಾಗಿ ಕೆಲಸ ಮಾಡುತ್ತಿದ್ದರು.

ಅಲ್ಲದೆ ಸೋಂಕರ್ ಸಹೋದರರೇ  ಶೂಟರ್‌ಗಳನ್ನು ಬಾಡಿಗೆಗೆ ಪಡೆದು, ಕೋಟಿಗಟ್ಟಲೆ ಹಣದ ವ್ಯವಸ್ಥೆ ಮಾಡಿ ಕೊಲೆಗೆ ಸ್ಕೆಚ್ ಹಾಕಿದ್ದರು ಎಂದು ಸಿಬಿಐ ಪತ್ತೆಹಚ್ಚಿದೆ.

ಪಕ್ಷಾಂತರದ ಇತಿಹಾಸ!

ಮೂಲಗಳ ಪ್ರಕಾರ, ಸಾಗರ್ ಸೋಂಕರ್ ಮತ್ತು ಸಾಹಿಬ್ ಸೋಂಕರ್ ಸಹೋದರರು 2020 ರವರೆಗೆ ತೃಣಮೂಲ ಕಾಂಗ್ರೆಸ್ (TMC) ಶಾಸಕರೊಬ್ಬರ ಬಳಿ ಕೆಲಸ ಮಾಡುತ್ತಿದ್ದರು. ಆದರೆ ವಿಧಾನಸಭಾ ಚುನಾವಣೆಗೆ ಮುನ್ನ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

‘ರಹಸ್ಯ ಫೋನ್ ಕಾಲ್ಸ್’!

ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದರೂ, ಕೊಲೆಯ ಹಿಂದೆ ವಿರೋಧ ಪಕ್ಷದ ರಾಜಕೀಯ ಪಿತೂರಿ ಇರುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಸಿಬಿಐ ಹೇಳಿದೆ. ಆರೋಪಿಗಳ ಕಾಲ್ ಡಿಟೇಲ್ಸ್ (CDR) ಪರಿಶೀಲಿಸಿದಾಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಆರೋಪಿ ಸಾಗರ್ ಸೋಂಕರ್, ಚಂದ್ರನಾಥ್ ರಥ್ ಜೊತೆ ಕೆಲಸ ಮಾಡುತ್ತಿದ್ದ ಅವಧಿಯಲ್ಲೂ ವಿರೋಧ ಪಕ್ಷದ (TMC) ಪ್ರಧಾನ ಕಚೇರಿಯ ಲ್ಯಾಂಡ್‌ಲೈನ್ ಸಂಖ್ಯೆಗೆ ನಿರಂತರವಾಗಿ ಕರೆ ಮಾಡುತ್ತಿದ್ದ.

ಅವರು ವಿರೋಧ ಪಕ್ಷದ ಪ್ರಭಾವಿ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬುದು ಡಿಜಿಟಲ್ ಪುರಾವೆಗಳಿಂದ ಸಾಬೀತಾಗಿದೆ.

ಸಿಬಿಐ ಮಾಹಿತಿಯ ಪ್ರಕಾರ, ಚಂದ್ರನಾಥ್ ಅವರನ್ನು ಕೊಲ್ಲುವ ಸಂಚು ಡಿಸೆಂಬರ್ 2025 ರಲ್ಲೇ ಸಿದ್ಧವಾಗಿತ್ತು. ಆದರೆ ಹಲವು ಕಾರಣಗಳಿಂದ ಯೋಜನೆ ಮುಂದೂಡಲ್ಪಟ್ಟು, ಮೇ ತಿಂಗಳಲ್ಲಿ ಕಾರ್ಯಗತಗೊಂಡಿದೆ.

ಇದುವರೆಗೆ 11 ಮಂದಿ ಬಂಧನ!

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಪೊಲೀಸರು ಇದುವರೆಗೆ ಒಟ್ಟು 11 ಜನರನ್ನು ಬಂಧಿಸಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಾಡಿಗೆಗೆ ಬಂದಿದ್ದ 6 ಜನ ಶಾರ್ಪ್ ಶೂಟರ್‌ಗಳು (ಮೋನು ಸಿಂಗ್, ರಾಜ್ ಸಿಂಗ್, ಗೋಲು ಸಿಂಗ್ ಇತ್ಯಾದಿ) ಹಾಗೂ ಹಣದ ವ್ಯವಹಾರ ಕುದುರಿಸಿದ್ದ ಮಧ್ಯವರ್ತಿಗಳನ್ನು ಈಗಾಗಲೇ ಜೈಲಿಗಟ್ಟಲಾಗಿದೆ.

ಇದನ್ನೂ ಓದಿ: ಕ್ರೈಮ್ ಸ್ಟೋರಿ… ಇವರು ಡ್ರಗ್ಸ್ ಟೀಚರ್ಸ್​..!

ರಾಜಕೀಯ ತಲ್ಲಣ:

ಮುಖ್ಯಮಂತ್ರಿಗಳ ಆಪ್ತನ ಕೊಲೆಯಲ್ಲಿ ಬಿಜೆಪಿ ಕಾರ್ಯಕರ್ತರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಆಡಳಿತ ಪಕ್ಷಕ್ಕೆ ಮುಜುಗರ ತಂದಿದ್ದರೂ, ಅವರು ವಿರೋಧ ಪಕ್ಷದ ನಾಯಕರ ಇಶಾರೆಯಂತೆ ಕೆಲಸ ಮಾಡಿದ ‘ಕೋವರ್ಟ್’ (ರಹಸ್ಯ ಏಜೆಂಟ್) ಗಳಾಗಿದ್ದರೇ ಎಂಬ ಕೋನದಲ್ಲಿ ಸಿಬಿಐ ತನಿಖೆ ಚುರುಕುಗೊಳಿಸಿದೆ. ಸದ್ಯ ಬಂಧಿತರನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ವಿಚಾರಣೆ ನಡೆಯುತ್ತಿದೆ.

ಜಿಯೋ ಕನ್ನಡ ನ್ಯೂಸ್​ನ ವಾಟ್ಸ್​ಆ್ಯಪ್ ಗ್ರೂಪ್​ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

About the Author

Jiokannadanews

Administrator

jiokannadanews.com

Visit Website View All Posts

Post navigation

Previous: ಕ್ರೈಮ್ ಸ್ಟೋರಿ… ಇವರು ಡ್ರಗ್ಸ್ ಟೀಚರ್ಸ್​..!
Next: ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ: ವೇತನ 90 ಸಾವಿರ ರೂ.

Related Stories

Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 4 weeks ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 4 weeks ago
Yasin Malik Seeks Death Penalty, Announces Divorce From Pak Wife
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Jiokannadanews Posted on 4 weeks ago

Trending News

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು FIR against former MP Pratap Simha over T. Narasipura row 1
  • ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು

Posted on 2 weeks ago
ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 2
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 3 weeks ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 3
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 4 weeks ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 4
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 4 weeks ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 5
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 4 weeks ago

You may have missed

FIR against former MP Pratap Simha over T. Narasipura row
  • ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ​ದಾಖಲು

Jiokannadanews Posted on 2 weeks ago
Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 3 weeks ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 4 weeks ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 4 weeks ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.