RCB
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ಆರ್ಸಿಬಿ ತಂಡದ ಪ್ರಮುಖ ವೇಗಿ ಯಶ್ ದಯಾಳ್ (Yash Dayal) ಈ ಬಾರಿಯ ಐಪಿಎಲ್ನಿಂದ ಕೈ ಬಿಡಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಧಿಕೃತವಾಗಿ ಖಚಿತಪಡಿಸಿದೆ.
ಯಶ್ ದಯಾಳ್ನ ಕೈ ಬಿಡಲು ಕಾರಣವೇನು?
ಯಶ್ ದಯಾಳ್ ವಿರುದ್ಧ ಅನೇಕರ ಕಡೆ ದೂರುಗಳು ದಾಖಲಾಗಿವೆ. ಈ ಗಂಭೀರ ಕಾನೂನು ಪ್ರಕರಣಗಳ ಹಿನ್ನೆಲೆಯಲ್ಲಿ ಆರ್ಸಿಬಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ/
ಆರ್ಸಿಬಿ ತಂಡದ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರು ದಯಾಳ್ ಅವರೊಂದಿಗೆ ಚರ್ಚಿಸಿ, ಈ ಪರಿಸ್ಥಿತಿಯಲ್ಲಿ ಈ ಸೀಸನ್ನಲ್ಲಿ ಆಡದಿರುವುದೇ ಒಳ್ಳೆಯದು ಎಂದು ತಿಳಿಸಿದ್ದಾರೆ. ಇದಾಗ್ಯೂ ಆರ್ಸಿಬಿ ಜೊತೆಗಿನ ಅವರ ಒಪ್ಪಂದ ಮುಂದುವರಿಯಲಿದೆ.
ಬದಲಿ ಆಟಗಾರ ಯಾರು?
ಸದ್ಯಕ್ಕೆ RCB ಯಾವುದೇ ಬದಲಿ ಆಟಗಾರನನ್ನು ಘೋಷಿಸಿಲ್ಲ. ಹೀಗಾಗಿ ತಂಡದಲ್ಲಿರುವ ಅಭಿನಂದನ್ ಸಿಂಗ್, ಮಂಗೇಶ್ ಯಾದವ್ ಅಥವಾ ರಸಿಖ್ ಸಲಾಮ್ ಅವರಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆಯಿದೆ.
ಯಶ್ ದಯಾಳ್ ವಿರುದ್ಧದ ಪ್ರಕರಣಗಳಾವುವು?
- ಪೋಕ್ಸೊ (POCSO) ಪ್ರಕರಣ: ಜೈಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯಶ್ ದಯಾಳ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
- ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರು ಇವರ ಮೇಲೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್‌ಐಆರ್ (FIR) ದಾಖಲಿಸಿದ್ದಾರೆ.
- ವಂಚನೆ ಪ್ರಕರಣ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂಬ ಆರೋಪವೂ ಯಶ್ ದಯಾಳ್ ಮೇಲಿದೆ.
ಇದನ್ನೂ ಓದಿ: IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ
ಈ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಅವರು ಕಾನೂನು ಪ್ರಕ್ರಿಯೆಗಳಲ್ಲಿ ಭಾಗಿಯಾಗಬೇಕಿರುವುದರಿಂದ ಮತ್ತು ಅವರ ವೈಯಕ್ತಿಕ ಸುರಕ್ಷತೆ ಹಾಗೂ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು RCB ಈ ಬಾರಿಯ ಸೀಸನ್ನಿಂದ ಅವರನ್ನು ಕೈ ಬಿಟ್ಟಿದ್ದಾರೆ.
🏏 𝐓𝐇𝐑𝐄𝐀𝐃 (1/5):
RCB Home Matches at Chinnaswamy: IMPORTANT INFORMATION 🚨@BlrCityPolice pic.twitter.com/tWLTxjsPHe— Royal Challengers Bengaluru (@RCBTweets) March 20, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್,ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಜೇಕಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್.