Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’
  • ಕ್ರೈಮ್
  • ರಾಜ್ಯ

ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’

Jiokannadanews Posted on 7 months ago
Karnataka Police

ಕರ್ನಾಟಕದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆಯಾ? ಈ ಒಂದು ವರದಿಯನ್ನು ಮುಂದಿಟ್ಟರೆ ಖಂಡಿತ ಹೌದು ಎಂದೆನಿಸುತ್ತದೆ. ಏಕೆಂದರೆ ಇಲ್ಲಿ ಕಳ್ಳರದ್ದೇ ಮೇಲುಗೈ. ಅಂದರೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ದಾಖಲಾಗಿರುವ ವಾಹನ ಕಳವು, ಮನೆಗಳ್ಳತನ ಮತ್ತು ದರೋಡೆ, ಸುಲಿಗೆಗಳ ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಕಳ್ಳರ ಹಾವಳಿ ಹೆಚ್ಚಾಗಿರುವುದು ಸ್ಪಷ್ಟವಾಗುತ್ತದೆ. ಹೀಗೆ ಕಳ್ಳರ ಹಾವಳಿ ಹೆಚ್ಚಾಗಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಕಳ್ಳರನ್ನು ಹಿಡಿಯುವಲ್ಲಿ ಪೊಲೀಸರು ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ರಾಜ್ಯದ ಬಹುತೇಕ ಠಾಣೆಯಲ್ಲೂ ಪ್ರತಿ ದಿನ ಒಂದಲ್ಲ ಒಂದು ಕಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ಇವುಗಳಲ್ಲಿ ಸಾಮಾನ್ಯ ಕಳ್ಳತನದ ಪ್ರಕರಣಗಳಿವೆ, ವಾಹನ ಕಳ್ಳತಗಳ ದೂರುಗಳಿವೆ. ಇನ್ನು ದರೋಡೆ, ಸುಲಿಗೆ ಪ್ರಕರಣಗಳು ಕಂಡು ಬರುತ್ತವೆ. ಆದರೆ ಇವುಗಳನ್ನು ಬೇಧಿಸುವಲ್ಲಿ ಕರ್ನಾಟಕ ಪೊಲೀಸರು ವಿಫಲರಾಗುತ್ತಿರುವುದೇ ಅಚ್ಚರಿ.

ಏಕೆಂದರೆ 2025 ರಲ್ಲಿ ಒಟ್ಟು 30,876 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಕಳೆದ ವರ್ಷ ಭೇದಿಸಿರುವುದು ಕೇವಲ 7236 ಕೇಸ್​​ಗಳು ಮಾತ್ರ ಎಂದರೆ ನಂಬಲೇಬೇಕು. ಅಂದರೆ 23 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.

ಒಂದು ವರ್ಷದಲ್ಲಿ 23 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದರೆ ಸಮಾಜದ ಗತಿಯೇನು ಎಂಬ ಪ್ರಶ್ನೆ ಮೂಡುವುದು ಸಹಜ. ಹೀಗಾಗಿಯೇ ಇದೀಗ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ.

ಬೆಂಗಳೂರಿನಲ್ಲೇ ಕಳ್ಳರ ಗ್ಯಾಂಗ್:

ಕರ್ನಾಟಕದಲ್ಲಿ ದಾಖಲಾಗುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಬಹುತೇಕ ಬೆಂಗಳೂರಿನಲ್ಲಿಯವು ಎಂಬುದು ವಿಶೇಷ. ಅಂದರೆ ಬೆಂಗಳೂರಿನಲ್ಲೇ ಹೆಚ್ಚು ಕಳ್ಳರು ಬೀಡು ಬಿಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಕೇಸ್​​​ಗಳು.

2023 ರಲ್ಲಿ ಬೆಂಗಳೂರಿನ ದಾಖಲಾಗಿದ್ದ ಪ್ರಕರಣಗಳ ಸಂಖ್ಯೆ 45990. ಇದರಲ್ಲಿ ಪೊಲೀಸರು 17057 ಕೇಸ್​​​ಗಳನ್ನು ಭೇದಿಸಿದ್ದಾರೆ.
2024 ರಲ್ಲಿ ಬೆಂಗಳೂರಿನಲ್ಲಿ 40628 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 15815 ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ 2023 ರಲ್ಲಿ ಮತ್ತು 2024 ರಲ್ಲಿ 27,587 ಮತ್ತು 23,057 ಪ್ರಕರಣಗಳ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂಬುದು. ಅಂದರೆ 2 ವರ್ಷಗಳಲ್ಲಿ 50 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲೇ ಬಾಕಿ ಉಳಿದಿದ್ದವು.

ಇದೀಗ 2025 ರ ಒಟ್ಟು 30,876 ಕಳ್ಳತನ ಪ್ರಕರಣಗಳಲ್ಲಿ 23 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದಿವೆ. ಅಂದರೆ ಇಲ್ಲಿ ಪೊಲೀಸರಿಗಿಂತ ಕಳ್ಳರೇ ಚಾಣಾಕ್ಷತೆ ಮೆರೆಯುತ್ತಿರುವುದು ಸುಳ್ಳಲ್ಲ.

ಈ ಚಾಣಾಕ್ಷತೆಯನ್ನು ಮೀರಿ ಕರ್ನಾಟಕ ಪೊಲೀಸರು ಆದಷ್ಟು ಬೇಗ ಎಲ್ಲಾ ರೀತಿ ಕಳ್ಳರಿಗೆ ಕಡಿವಾಣ ಹಾಕಲಿ ಎಂದು ಆಶಿಸೋಣ.

About the Author

Jiokannadanews

Administrator

jiokannadanews.com

Visit Website View All Posts
Tags: Crime News

Post navigation

Previous: ಕೊನೆ ಕ್ಷಣದ ಬದಲಾವಣೆ… ಟೀಮ್ ಇಂಡಿಯಾಗೆ ಸಿರಾಜ್ ಎಂಟ್ರಿ
Next: 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!

Related Stories

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
Two Indian Teachers Murdered by Close Friend
  • ಕ್ರೈಮ್

ಇಬ್ಬರು ಶಿಕ್ಷಕಿಯರ ಭೀಕರ ಕೊಲೆ, ಆಪ್ತ ಗೆಳತಿ ಅರೆಸ್ಟ್!

Jiokannadanews Posted on 1 week ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 2 days ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 6 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 1 week ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 6 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.